ಕ್ರೈಂ ನ್ಯೂಸ್

ಸಮವಸ್ತ್ರದಲ್ಲಿಯೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ

ಸುದ್ದಿಲೈವ್/ಶಿವಮೊಗ್ಗ

ನಿನ್ನೆ ಕರ್ತವ್ಯ ಮುಗಿಸಿಕೊಂಡು ಬಂದಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿನೋಬ ನಗರದ ಚೌಕಿ ಹತ್ತಿರವಿರುವ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮೂರು ದಿನಗಳ ಹಿಂದೆ ಪತ್ನಿ ಮಿದುಳು ಜ್ವರದಿಂದ ಅಸುನೀಗಿದ್ದರು. ಈ ನೋವು ಜಯಪ್ಪನವರಲ್ಲಿ ಅಗಾಧವಾಗಿ ಬೇರೂರಿತ್ತು ಎಂದು ಹೇಳಲಾಗಿದೆ. ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಅವರ ಆಪ್ತವಲಯ ಹೇಳುತ್ತಿದೆ.

ಕೆಲಸ ಮುಗಿಸಿಕೊಂಡು ಮನೆಗೆ ಹೋದ ಜಯಪ್ಪ ಸಮವಸ್ತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜಯಪ್ಪನವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ವಿನೋಬ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ-https://suddilive.in/2023/10/02/396/

Related Articles

Leave a Reply

Your email address will not be published. Required fields are marked *

Back to top button