ಚುನಾವಣೆ ನಂತರ ಕಾಂಗ್ರೆಸ್ ಧೂಳಿಪಟವಾಗಲಿದೆ-ಬಿ.ಎಸ್ ವೈ

ಸುದ್ದಿಲೈವ್/ಶಿವಮೊಗ್ಗ

ಸೂರ್ಯ ಚಂದ್ರರು ಇರೋದು ಎಷ್ಟು ಸತ್ಯವೋ ಮೋದಿ ಪ್ರಧಾನಮಂತ್ರಿ ಆಗೋದು ಅಷ್ಟೇ ಸತ್ಯ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಮಾಧ್ಯಮಗಳಿಗೆ ಮಾತನಾಡಿದ ಅವರು
ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಒಳ್ಳೆಯ ‌ಕೆಲಸ ಮಾಡಿದ್ದಾರೆ. ರಾಘವೇಂದ್ರ ಬಗ್ಗೆ ಕೆಲವರು ಹಗುರವಾಗಿ ಮಾತನಾಡ್ತಿದ್ದಾರೆ. ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವವರು ಯೋಚನೆ ಮಾಡಬೇಕು ಆ ರೀತಿಯಲ್ಲಿ ಗೆದ್ದು ಬರಲಿದ್ದಾರೆ ಎಂದರು.

ಈ ಬಾರಿ ಆ ರೀತಿಯ ಮತ ಹಾಕಬೇಕು. ಈ ಚುನಾವಣೆ ನಂತರ ಕಾಂಗ್ರೆಸ್ ಧೂಳಿಪಟ ಆಗಲಿದೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದೇನೆ. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 28 ಸ್ಥಾನವನ್ನೂ ಬಿಜೆಪಿ ಗೆಲ್ಲಲಿದೆ ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಪ್ರಧಾನಿ ಮೋದಿ ಅವರ ಪ್ರಭಾವ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂದರು.

ನಾಳೆಯಿಂದ ಮತ್ತೆ ನನ್ನ ಪ್ರವಾಸ ಆರಂಭವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಅಮಿತ್ ಶಾ , ನಡ್ಡಾ ಪ್ರಚಾರಕ್ಕೆ ಬರುತ್ತಿದ್ದಾರೆ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರು ಪ್ರಚಾರ ನಡೆಸುತ್ತಿದ್ದಾರೆ.

ಇವೆಲ್ಲದರ ಪರಿಣಾಮ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಸಂಕಲ್ಪದಲ್ಲಿ ಯಶಸ್ವಿ ಆಗುತ್ತೇವೆ ಎಂದರು.

ಇದನ್ನೂ ಓದಿ-https://suddilive.in/archives/13932

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close