ಸುದ್ದಿಲೈವ್/ಶಿವಮೊಗ್ಗ
ಬೆಂಗಳೂರಿನಲ್ಲಿ ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಿದನ್ನ ಖಂಡಿಸಿ ಇಂದು ಜಿಲ್ಲಾ ವಿಡಿಯೋ ಮತ್ತು ಫೋಟೋಗ್ರಾಫರ್ಸ್ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಬೆಂಗಳೂರಿನ ಶಮ್ಸ್ ಕಲ್ಯಾಣ ಮಂಟಪದಲ್ಲಿ ಕಾರ್ಯನಿರತ ಛಾಯಾಗ್ರಾಹಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆನಡೆದಿದೆ. ಕ್ಯಾಮೆರಾಗಳನ್ನ ಹಾಳುಮಾಡಲಾಗಿದೆ. ಹಾಳುಮಾಡಿರುವ ಕಿಡಿಗೇಡಿಗಳನ್ನ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಅಸೋಸಿಯೇಷನ್ ಆಗ್ರಹಿಸಿದೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಶ್ತೀನಿವಾಸ, ರಾಜ್ಯ ಸಂಘಗಳ ಒಕ್ಕೂಟದ ಅಧ್ಯಕ್ಷ ಶ್ರೀಧರ್ ಮೊದಲಾದವರು ಭಾಗಿಯಾಗಿದ್ದರು.
ಇದನ್ನೂ ಓದಿ-https://suddilive.in/archives/15424
Tags:
ನಗರ ಸುದ್ದಿಗಳು