ಸುದ್ದಿಲೈವ್/ಶಿವಮೊಗ್ಗ
ಮಾಜಿ ಸಚಿವ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರಿಂದ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಭಾಹಿಯಾಗಿರುವುದನ್ನ ಖಂಡಿಸಿ ಇಂದು ನಗರದ ಗೋಪಿ ಸರ್ಕಲ್ ನಲ್ಲಿ ಜಿಲ್ಲಾ ಐಎನ್‌ಟಿಯುಸಿ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.
ದೇವೇಗೌಡರು ತಮ್ಮ ಮಗನ ಹಾಗೂ ಮೊಮ್ಮಗನ ರಕ್ಷಣೆಗಾಗಿ ಮಹಿಳೆಯರ ಮಾನ ಹರಾಜು ಹಾಕುತ್ತಿದ್ದಾರೆ. ಕುಮಾರಸ್ವಾಮಿಯವರು ತಮ್ಮ ಅಣ್ಣ ಮತ್ತು ಅಣ್ಣನ ಮಕ್ಕಳ ರಕ್ಷಣೆಯಲ್ಲಿ.. ಮಾನ ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಭಟಕರು ಆರೋಪಿಸಿದರು.
ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ರಾಘವೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರಕರಣವನ್ನ ಸರ್ಕಾರ ಎಸ್ಐಟಿ ಗೆ ನೀಡಿರುವುದು ಸ್ವಾಗತಾರ್ಹ ಎಂದು ತಿಳಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ದೇವೇಂದ್ರಪ್ಪ ಮತ್ತು ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/14275
Tags:
ನಗರ ಸುದ್ದಿಗಳು