ಸುದ್ದಿಲೈವ್/ಸೊರಬ
ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾದ ಪ್ರಖ್ಯಾತ ವೈದ್ಯರಾದ ಡಾ. ಧನಂಜಯ ಸರ್ಜಿ ಅವರಿಗೆ ಬೆಂಬಲ ಸೂಚಿಸುವುದಾಗಿ ಸ್ನಾತಕೋತ್ತರ ಪತ್ರಿಕೋದ್ಯಮ ಪದವೀಧರರ ವೇದಿಕೆ ಅಧ್ಯಕ್ಷ ಕೆ.ವಿ. ದತ್ತಾತ್ರೇಯ ತಿಳಿಸಿದ್ದಾರೆ.
ಡಾ. ಧನಂಜಯ ಸರ್ಜಿ ಅವರು ಸಮಾಜ ಸೇವೆ ಜೊತೆಗೆ ಅನೇಕ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿದ್ದಲ್ಲಿ ಪದವೀಧರರ ಪರವಾದ ಧ್ವನಿ ಎತ್ತುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಡಾ. ಸರ್ಜಿ ಅವರಿಗೆ ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಧನಂಜಯ ಸರ್ಜಿ ಅವರ ಸೇವೆ ಅಪಾರವಾಗಿದೆ. ಸರಳ ವ್ಯಕ್ತಿತ್ವವನ್ನು ಹೊಂದಿರುವ ಅವರಿಗೆ ಪ್ರತಿಯೊಬ್ಬ ಪದವೀಧರ ಮತದಾರರು ಬೆಂಬಲ ನೀಡಬೇಕು. ಈ ಮೂಲಕ ಪದವೀಧರರ ಸಮಸ್ಯೆಯನ್ನು ಸಮೀಪದಿಂದ ಕಂಡಿರುವ ಹಾಗೂ ಕೃಷಿ ಕುಟುಂಬದಿಂದ ಬಂದ ಸರ್ಜಿ ಅವರೇ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ-https://suddilive.in/archives/15506