ಸುದ್ದಿಲೈವ್/ಶಿವಮೊಗ್ಗ
ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನ ಸರ್ಕಾರ ಸಿಐಡಿಗೆ ವಹಿಸಿದ್ದು, ಸಿಐಡಿ ಅಧಿಕಾರಿಗಳು ಇಂದು ಅಥವಾ ನಾಳೆ ಶಿವಮೊಗ್ಗಕ್ಕೆ ಆಗಮಿಸುವ ನಿರೀಕ್ಷೆ ಇದೆ.
ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಡೆತ್ ನೋಟ್ ಬರೆದಿದ್ದ ಅಕೌಂಟೆಂಟ್ ಚಂದ್ರಶೇಖರ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೊನ್ನೆ ಮೇ.25 ಮತ್ತು 26 ರಂದು ರಜೆಗೆ ಬಂದಿದ್ದ ಚಂದ್ರಶೇಖರ್, ಪತ್ನಿ ಮತ್ತು ಮಗ ಹೊರಗಡೆ ಹೋದ ವೇಳೆ 7 ಪುಟದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣವನ್ನ ಸರ್ಕಾರ ಸಿಐಡಿಗೆ ವಹಿಸಿದೆ. ಸಿಐಡಿ ಅಧಿಕಾರಿಗಳು ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಶಿವಮೊಗ್ಗವನ್ನ ಭೇಟಿ ಮಾಡುವ ನಿರೀಕ್ಷೆ ಇದೆ.
ಈ ಬೆನ್ನಲ್ಲೇ ಸಚಿವ ನಾಗೇಂದ್ರ ಅವರ ಪವಿಶೇಷ ಅಧಿಕಾರಿಗಳು ಮೃತ ಚಂದ್ರಶೇಖರ್ ಅವರ ಮನೆಯನ್ನ ಭೇಟಿ ಮಾಡಿ ಹೋಗಿದ್ದಾರೆ.
ಇದನ್ನೂ ಓದಿ-https://suddilive.in/archives/15658