ಸುದ್ದಿಲೈವ್/ಉಡುಪಿ/ಶಿವಮೊಗ್ಗ
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿ ಮತಯಾಚನೆ ಜೊತೆಗೆ ಶ್ರೀಗಳ ಶ್ರೀರಕ್ಷೆಗಾಗಿ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ.
ಮೊನ್ನೆ ಆದಿಚುಂಚನ ಗಿರಿ ಮಠದ ಶ್ರೀಗಳಾದ ಪ್ರಸನ್ನ ಕುಮಾರ್ಶ್ರೀಗಳನ್ನ ಭೇಟಿಯಾದ ಬೆನ್ನಲ್ಲೇ ಉಡುಪಿ ಮಠದ ಪೇಜಾವರ ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಚನ ಪಡೆದಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿದ ಡಾ.ಸರ್ಜಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ , ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/15353
Tags:
ರಾಜಕೀಯ ಸುದ್ದಿಗಳು