ಸುದ್ದಿಲೈವ್/ಹೊನ್ನಾಳಿ
ವಿಧಾನ ಸಭಾ ಕ್ಷೇತ್ರದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರೊಂದಿಗೆ ಸಂವಾದ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡರ ಪರವಾಗಿ ಮತಪ್ರಚಾರ ನಡೆಸಿದರು. ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತಯಾಚನೆ ನಡೆಸಿದರು.
ಇತ್ತ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೀರ್ಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಗುರುವಾರ ತೀರ್ಥಹಳ್ಳಿಪಟ್ಟಣದ ಮಯೂರ ಹೋಟೆಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮಾತನಾಡಿ ವೃತ್ತಿಯಲ್ಲಿ ವೈದ್ಯನಾದರೂ ಪ್ರವೃತ್ತಿಯಲ್ಲಿ ಸ್ವಯಂ ಸೇವಕ , ಪ್ರತಿಯೊಬ್ಬ ಪದವೀಧರರ ಸಮಸ್ಯೆ ಏನು ಎಂಬುದನ್ನು ಅರ್ಥ ಮಾಡಿಕೊಂಡಿದ್ದೇನೆ ಸಾಮಾನ್ಯ ಜನರ ಕಷ್ಟ ಏನು ಎಂಬುದನ್ನು ಅರ್ಥ ಮಾಡಿಕೊಂಡಿದ್ದೇನೆ. ಎಲ್ಲರ ಧ್ವನಿಯಾಗಿ ನಾನು ವಿಧಾನ ಪರಿಷತ್ ಕೆಲಸ ಮಾಡುತ್ತೇನೆ ನೂರಕ್ಕೆ ನೂರರಷ್ಟು ನಾನು ಮತ್ತು ಭೋಜೇಗೌಡರು ಮೊದಲ ಪ್ರಾಶಸ್ತ್ಯದ ಮತದಲ್ಲಿ ಮೊದಲ ಹಂತದಲ್ಲಿ ಗೆಲುವನ್ನು ಸಾಧಿಸುತ್ತೇವೆ ಎಂದು ಹೇಳಿದರು
ಈ ವೇಳೆ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ ಹೆದ್ದೂರು , ಜಿಡಿಎಸ್ ನ ಕುಣಜೆ ಕಿರಣ್ ಸೇರಿ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/15825