ಸ್ಮಾರ್ಟ್ ಸಿಟಿ ಕಾಮಗಾರಿ ತನಿಖೆಗೆ ಕೆಬಿಪಿ ಆಗ್ರಹ

ಸುದ್ದಿಲೈವ್/ಶಿವಮೊಗ್ಗ

ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಾಗಿದೆ ಎಙದು ಕೂಗಿದರೂ ಸ್ಪಂಧನೆ ಆಗುತ್ತಿಲ್ಲ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಕೆಬಿ ಪ್ರಸನ್ನ ಕುಮಾರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಗಾಲ ಆರಂಭವಾಗಿಲ್ಲ. ಮಖೆ ಬಂದ ಕಾರಣ  ರಸ್ತೆಯಾವುದು ಚರಂಡಿಯಾವುದು ಗೊತ್ತಾಗ್ತ ಇಲ್ಲ. ಮಳೆಯ ಮುನ್ಸೂಚನೆ ಇನ್ನೂ ಇದೆ. ಆದರೆ ಸ್ನಾರ್ಟ್ ಸಿಟಿ ಕಾಮಗಾರಿ ಕುರಿತು‌ ತನಿಖೆ ನಡೆಸುವುದಾಗಿ ಹೇಳಿದ್ದ ಸಚಿವರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ದೂರಿದರು.

ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಮಾತನಾಡಿದ್ದಕ್ಕೆ ಕೋರ್ಟ್ ಗೆ ಎಳೆಯುವ ಕೆಲಸ ಆಗಿದೆ. ಈ ಕಾಮಗಾರಿಯ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಗುತ್ತಿಗೆದಾರರ ಕೈಯಿಂದಲೇ ಈ ಕಾಮಗಾರಿ ಪುನರ್ ಆರಂಭವಾಗಬೇಕಿದೆ. ಮನೆ ಕಳೆದುಕೊಂಡವರಿಗೆ ಹಾನಿಗೊಳಗಾದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ತಕ್ಷಣ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಕರೆದು ತಕ್ಷಣ ತನಿಖೆಗೆ ಆದೇಶಿಸಬೇಕು ಮತ್ತು ಹಾನಿಗೊಳಗಾದವರಿಗೆ ಪರಿಹಾರ ಘೋಷಿಸಬೇಕು ಎಂದ ಕೆಬಿಪಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ಭರದಿಂದ ಸಾಗಬೇಕಿದೆ ಎಂದು ಆಗ್ರಹಿಸಿದರು.

ಇದನ್ನೂ ಓದಿ-https://suddilive.in/archives/15177

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close