ಎಸ್ಪಿ ದಿನೇಶ್ ಸೇರಿ ನಾಲ್ವರು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ಸುದ್ದಿಲೈವ್/ಶಿವಮೊಗ್ಗ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಎಸ್ಪಿ ದಿನೇಶ್ ರನ್ನ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪಕ್ಷದಿಂದ ಉಚ್ಚಾಟಿಸಿ ಆದೇಶಿದೆ.

ಕೆಪಿಸಿಸಿಯ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಎಸ್ಪಿ ದಿನೇಶ್ ಸೇರಿದಂತೆ ನಾಲ್ವರನ್ನ ಉಚ್ವಾಟಿಸಿ ಆದೇಶಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರಕ್ಕೆ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಎಸ್ಪಿ ದಿನೇಶ್,

ಬೆಂಗಳೂರು ಪದವೀಧರ ಕ್ಷೇತ್ರದ ಫರ್ಡಿನಾಂಡ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ನಂಜೇಶ್(ಚಿಕ್ಕಮಗಳೂರು), ಆಗ್ನೇಯ ಶಿಕ್ಷಕರ ಕ್ಷೇತ್ರದ ವಿನೋದ್ ಶಿವರಾಜ್, ಚಿತ್ರದುರ್ಗ ಜಿಲ್ಲೆಯ ಲೋಕೇಶ್ ತಾಳಿಕಟ್ಟೆ ಅವರನ್ನ 6 ವರ್ಷದ ವರೆಗೆ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.

ಈ ನಾಲ್ವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ಶಿಸ್ತನ್ನ ಉಲ್ಲಂಘಿಸಿದ್ದಾರೆ. ಪಕ್ಷದ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಇವರನ್ನ ಕೆಪಿಸಿಸಿ ಅಧ್ಯಕ್ಷರ‌ ಆದೇಶದ ಮೇರೆಗೆ 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸ್ಥಾನದಿಂದ ಉಚ್ಚಾಟಿಸಿರುವುದಾಗಿ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/15372

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close