ಬಿಜೆಪಿಯ ಹಿರಿಯ ಮುಖಂಡರಿಗೆ ಡಾ.ಸರ್ಜಿಯಿಂದ ಮಾಲಾರ್ಪಣೆ

ಸುದ್ದಿಲೈವ್/ಶಿವಮೊಗ್ಗ

ನೈರುತ್ಯ ಪದವೀದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವೈದ್ಯ ಡಾ.ಧನಂಜಯ ಸರ್ಜಿ ಬಿಜೆಪಿಯ ಧುರೀಣರಿಗೆ ಮಾಲಾರ್ಪಣೆ ಮಾಡುವ ಮೂಲಕ ಚುನಾವಣ ಕಣದಲ್ಲಿ ಭರ್ಜರಿ ಸಂಚಲನ ಮೂಡಿಸಿದ್ದಾರೆ.

ಶುಕ್ರವಾರ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶುಕ್ರವಾರ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ದಿ. ಶ್ರೀ ಡಾ ವಿ. ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/15428

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close