ಜ್ಞಾನಸುಧ- ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಕಾರ್ಯಕ್ರಮ

ಸುದ್ದಿಲೈವ್/ಕಾರ್ಕಳ

ಮೇ.29 ರಂದು ಬುಧವಾರದಂದು ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ೧೧ನೇ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಈ ಪ್ರತಿಷ್ಠಾನದ ವೇಳೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ.

ಎಸ್.ಎಸ್.ಎಲ್.ಸಿ., ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಜ್ಞಾನಸುಧಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ೬೮.೭೯ಲಕ್ಷ ರೂ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ.

ರಾಜ್ಯ ಹಾಗೂ ರಾಷ್ಟçಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ೨೨ ಡಿಸೆಂಬರ್ ೨೦೨೪ರ ಸಂಸ್ಥಾಪಕರ ದಿನಾಚರಣೆಯಂದು ವಿತರಿಸಲಾಗುವುದು.

ಈ ಸಮಾರಂಭದಲ್ಲಿ ಉಡುಪಿಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಯಾಗಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.)ನ ಸಂಸ್ಥಾಪಕರಾದ ನಾಡೋಜ ಡಾ. ಜಿ. ಶಂಕರ್ ರವರು ಭಾಗವಹಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ.ಸುನಿಲ್ ಕುಮಾರ್‌ರವರು ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್ನ ಆದ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿಯೂ ಎರಡು ಹಂತದ ವಿದ್ಯಾರ್ಥಿ ವೇತನದಲ್ಲಿ ಒಟ್ಟು ರೂ.೧ ಕೋಟಿ ೪೧ ಲಕ್ಷ ವಿದ್ಯಾರ್ಥಿವೇತನ ನೀಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಇದನ್ನೂ ಓದಿ-https://suddilive.in/archives/15609

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು