ಸುದ್ದಿಲೈವ್/ಶಿವಮೊಗ್ಗ
ಹೊಸನಗರದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರಿಗೆ ಸ್ವಾಮಿರಾವ್ ಅವರು ಹರಸಿದರು.
ಇದೇ ವೇಳೆ ನಡೆದ ಮತದಾರರ ಸಭೆಯಲ್ಲಿ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಪದವೀಧರರ ಕ್ಷೇತ್ರದ ಸಮಸ್ಯೆಗಳ ಅರಿವಿದ್ದು, ನೀವು ನನ್ನನ್ನು ಆಯ್ಕೆ ಮಾಡಿದರೆ ವಿಧಾನ ಪರಿಷತ್ ನಲ್ಲಿ ತಮ್ಮೆಲ್ಲರ ಧ್ವನಿಯಾಗುವೆ, ಅತ್ಯಧಿಕ ಮತಗಳಿಂದ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ , ಆಲವಳ್ಳಿ ವೀರೇಶ್, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಲಗದ್ದೆ ಉಮೇಶ್, ಮಾಜಿ ಎಂ.ಗುಡ್ಡೆಕೊಪ್ಪ ಅಧ್ಯಕ್ಷ ಕಾಲಸಸಿ ಸತೀಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ ಸ್ವಾಮಿರಾವ್, ಮಂಡಾನಿ ಮೋಹನ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ತೀರ್ಥಹಳ್ಳಿ ಭಾರತೀಪುರದಲ್ಲಿ ಸಂಘ ಪರಿವಾರದ ಪ್ರಮುಖ್ ಹಾಗು ಮುಖಂಡರಾದ ದಿನೇಶ್ ಅವರ ನಿವಾಸದಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಸಮಾಲೋಚನೆ ನಡೆಸಿ, ಸಲಹೆ, ಸಹಕಾರ ಹಾಗೂ ಬೆಂಬಲ ಕೋರುವ ಜೊತೆಗೆ ಮತಯಾಚಿಸಿದರು. ಈ ವೇಳೆ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಪ್ರಮುಖರಾದ ಮಾಲತೇಶ್, ಸಂದೇಶ್ ನೋವೆಲ್ಲಾ, ಸುಬ್ರಮಣ್ಯ, ಲೋಹಿತಾಶ್ವ, ಗಂಗಾರಾಮ್ ಸೇರಿದಂತೆ ಸ್ಥಲೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಮಂಡಗದ್ದೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಭಟ್ರು ಅವರ ನಿವಾಸದ ಆವರಣದಲ್ಲಿ ಗುರುವಾರ ಬೆಳಗ್ಗೆ ಮತದಾರರರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮತಯಾಚಿಸಿದರು.
ಈ ವೇಳೆ ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ,ಉಡುಪಿ ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಮುಖಂಡರಾದ ನವೀನ್ ಹೆದ್ದೂರು, ಪ್ರಶಾಂತ್ ಕುಕ್ಕೆ, ಪ್ರಸಾದ್ ಶೆಟ್ಟಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಇದನ್ನೂ ಓದಿ-https://suddilive.in/archives/15819