ಸುದ್ದಿಲೈವ್/ಭದ್ರಾವತಿ
ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 22 ರ ರಾತ್ರಿ 10.00 ರಿಂದ 28ರವರೆಗೆ ಪ್ರತಿ ದಿನ 2000 ಕ್ಯುಸೆಕ್ಸ್ಗಳಂತೆ ಒಟ್ಟು 11,574 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಅವಧಿಯಲ್ಲಿ ಸಾರ್ವಜನಿಕರು ನದಿ ಪಾತ್ರದಲ್ಲಿ ತಿರುಗಾಡುವುದು, ದನಕರುಗಳನ್ನು ನದಿಗೆ ಇಳಿಸುವುದು ಇತ್ಯಾದಿ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದೆ. ಹಾಗೂ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್ಸೆಟ್ಗಳಿಂದ ನೀರೆತ್ತುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ-https://suddilive.in/archives/15289
Tags:
ನಗರ ಸುದ್ದಿಗಳು