ಸುದ್ದಿಲೈವ್/ಶಿವಮೊಗ್ಗ
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನಕ್ಕೆ ಕೆಲವು ದಿನಗಳು ಬಾಕಿ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮತಬೇಟೆ ಜೋರಾಗಿದೆ.
ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಸಭೆ ಜಿಲ್ಲಾಧ್ಯಕ್ಷರಾದ ರವಿ ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಎಸ್. ಎಲ್. ಭೋಜೆಗೌಡ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್,
ಸುಜಾಕುಶಾಲಪ್ಪ ಹಾಗೂ ಮಾಜಿ ಶಾಸಕರುಗಳಾದ ಕೆ. ಜಿ. ಬೋಪಯ್ಯ ಮತ್ತು ಅಪ್ಪಚ್ಚು ರಂಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲಿರ ಚಲನ್ ಕುಮಾರ್ ಹಾಗೂ ವಿ. ಕೆ. ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ,ನಗರ ಮಂಡಲ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ,
ಡಾ. ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ಸುವಿನ್ ಗಣಪತಿ ಹಾಗೂ ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿಯ ಕಾಲೇಜಿನಲ್ಲಿ ಮತಯಾಚನೆ
ಅದರಂತೆ ಮಡಿಕೇರಿಯ ಫೀಲ್ಡ್ ಮಾರ್ಶಲ್ ಕಾರಿಯಪ್ಪ ಕಾಲೇಜಿನಲ್ಲಿ ಮತಯಾಚನೆ ನಡೆದಿದೆ.
ಮಡಿಕೇರಿಯ ಫೀಲ್ಡ್ ಮಾರ್ಶಲ್ ಕಾರಿಯಪ್ಪ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಬಿಜೆಪಿಯ ವಿವಿಧ ನಾಯಕರು, ಮುಖಂಡರೊಂದಿಗೆ ತೆರಳಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.
ಈ ವೇಳೆ ಪ್ರಾಂಶುಪಾಲರಾದ ಮೇಜರ್ ಡಾ.ರಾಘವ ಬಿ., ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಡಿ.ಎಸ್. ಅರುಣ್, ಮಡಿಕೇರಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾಧ್ಯಕ್ಷರಾದ ರವಿ ಕಾಳಪ್ಪ, ಜಿಲ್ಲಾ ವಕ್ತಾರ ತಾಲೂರ್ ಕಿಶೋರ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೇನಿ, ಚಲನ್ ಕುಮಾರ್, ವಿ.ಕೆ.ಲೋಕೇಶ್, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾ ಸಂಚಾಲಕರಾದ ಡಾ.ನವೀನ್,
ಡಾ.ಸರ್ಜಿ ಗೆಲುವಿಗೆ ಸುದ್ದಿಗೋಷ್ಠಿ
ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್ ಸೇರಿದಂತೆ ಬಿಜೆಪಿಯ ವಿವಿಧ ಮುಖಂಡರು ಹಾಜರಿದ್ದರು. ಕೊಡಗು ಜಿಲ್ಲೆಯ ಮಡಿಕೇರಿ ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾದ ರವಿ ಕುಶಾಲಪ್ಪ ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಟಿ ನಡೆಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಗೆಲ್ಲಿಸುವಂತೆ ಮನವಿ ಮಾಡಿಕೊಳ್ಳಲಾಯಿತು.
ಈ ವೇಳೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಡಿ.ಎಸ್. ಅರುಣ್, ಮಡಿಕೇರಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ವಿರಾಜಪೇಟೆ ಮಾಜಿ ಶಾಸಕರಾದ ಕೆ.ಜಿ.ಬೋಪಣ್ಣ,
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ.ಲೋಕೇಶ್, ಮಹೇಶ್ ಜೇನಿ, ಚಲನ್ ಕುಮಾರ್, ರೈತ ಮೋರ್ಚಾ ಕಾರ್ಯದರ್ಶಿ ಡಾ.ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ, ಕಿಶೋರ್ ಕುಮಾರ್ ಮತ್ತಿತರ ಮುಖಂಡರು ಹಾಜರಿದ್ದರು.
ಕೊಡಗಿನ ಓಂಕಾರೇಶ್ವರ ದೇವರಿಗೆ ವಿಶೇಷ ಪೂಜೆ
ಕೊಡಗು ಜಿಲ್ಲೆ ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಚುನಾವಣೆಯಲ್ಲಿ ವಿಜಯಶಾಲಿಯಾಗುವಂತೆ ಪ್ರಾರ್ಥಿಸಿ ದೇವರಿಗೆ ವಿವಿಧ ನಾಯಕರು ಹಾಗೂ ಮುಖಂಡರೊಂದಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಲಾಗಿದೆ.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ರವಿ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಿಜೆಪಿ ಮಂಡಲ ನಗರ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಜಗದೀಶ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ, ಕವನ್ ಕಾವೇರಪ್ಪ, ರವಿ ಕಾಳಪ್ಪ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್ ಮತ್ತಿರರು ಭಾಗಿಯಾಗಿದ್ದರು.
ಸೊರಬದಲ್ಲಿ ಮತಯಾಚನೆ
ಸೊರಬ ಮಂಡಲದಲ್ಲಿ ಪದವೀಧರರ ಹಾಗೂ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಾದ ಡಾ:ಧನಂಜಯ್ ಸರ್ಜಿ ಹಾಗೂ ಭೋಜೇಗೌಡರ
ಪರವಾಗಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ ಯವರು ಈ ದಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರಲ್ಲಿ ಮತ ಯಾಚಿಸಿದರು.
ಈ ಸಮಯದಲ್ಲಿ ಮಂಡಲ ಅಧ್ಯಕ್ಷರಾದ ಪ್ರಕಾಶ್ತಲಕಾಲಕೊಪ್ಪ
ಮಧುರಾಯ್ ಶೇಟ್ ಅಶೋಕ್ ಶೇಟ್ ಷಡಕ್ಷರಿ ವೀರೇಶ್ ಮೇಸ್ತ್ರಿ
ಎಂ. ಕೆ. ಯೋಗೀಶ್ ಡಿ. ಶಿವಯೋಗಿ
ಉಪಸ್ಥಿತರಿದ್ದರು.