ಸುದ್ದಿಲೈವ್/ಶಿವಮೊಗ್ವ
ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಲೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:27.6.2024 ರಿಂದ 15.9.2024 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಡಿಸಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
(ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ಆಗುಂಬೆ ಮಾರ್ಗವಾಗಿ ಉಡುಪಿ ತಲುಪುವ ವಾಹನಗಳ ಸಂಚಾರವನ್ನ ನಿರ್ಬಂಧಿಸಿ ಆದೇಶಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಆಗುಂಬೆ-ಮಲ್ಪೆ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ವರದಿಯನ್ನ ಡಿಸಿಯವರು ಪಡೆದುಕೊಂಡಿದ್ದರಿಂದ ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಬೆ ಘಾಟಿಯಲ್ಲಿ ಮಳೆಯಿಂದಾಗಿ ಭಾರಿ ವಾಹನಗಳ ಓಡಾಟದಿಂದ ಭೂ ಕುಸಿತ ಆಗುವ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಇಂದಿನಿಂದ ಸೆಪ್ಟಂಬರ್ 15 ರವರೆಗೆ ಭಾರಿ ವಾಹನಗಳ ಸಂಚಾರವನ್ನು(ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು)ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಅನವು ಮಾಡಿಕೊಡಬಹುದೆಂದು ವರದಿಯಲ್ಲಿ ಸೂಚಿಸಿದ್ದಾರೆ. ಪ್ರಾದೇಶಿಕ ಸಾರಿಗೆ ಇಲಾಖೆಯ ವರದಿಯೂ ಸಹ ನಿಷೇಧಿಸಲು ಸೂಚಿಸಿರುವುದರಿಂದ
ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಡಿಸಿ ಗುರುದತ್ತ ಹೆಗಡೆಯವರು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲು ಸೂಚಿಸಿದ್ದಾರೆ.
ಬದಲಿ ಮಾರ್ಗ
ಭಾರಿ ವಾಹನವು ತೀರ್ಥಹಳ್ಳಿ ಕಡೆಯಿಂದ ಬರುವ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗವಾಗಿ ಚಲಿಸಲು ಸೂಚಿಸಿದೆ. ಉಡುಪಿ ಕಡೆಯಿಂದ ಬರುವವರು
ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗ ತಲುಪಬಹುದಾಗಿದೆ.
ಇದನ್ನೂ ಓದಿ-https://suddilive.in/archives/17926