ಸುದ್ದಿಲೈವ್/ಶಿವಮೊಗ್ಗ
ಡೆತ್ ನೋಟ್ ಬರೆದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿರುವ ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಹಾಜರು ಪಡಿಸಿದ ಆರೋಪಿಗಳಿಗೆ ಶಿವಮೊಗ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಜುಲೈ 3 ರವರೆಗೆ ಸಿಐಡಿ ವಶಕ್ಕೆ ನೀಡಲಾಗಿದೆ.
ಮೇ 26 ಕ್ಕೆ ಲೆಕ್ಕ ಅಧೀಕ್ಷಕ ಚಂದ್ರಶೇಖರ್ ಶಿವಮೊಗ್ಗ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿರುವ ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಲಾಗಿದೆ.
ಸಿಐಡಿ ಡಿ.ವೈ.ಎಸ್.ಪಿ. ಮೊಹಮ್ಮದ್ ರಫಿ ನೇತೃತ್ವದ ತಂಡ, 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ. ನಿಗಮದ ಮೇಲಾಧಿಕಾರಿಗಳಾದ ಎ1 ಆರೋಪಿ ಪದ್ಮನಾಭ್ ಹಾಗೂ ಎ2 ಪರಶುರಾಮ್ ಇಬ್ಬರನ್ನು ನ್ಯಾಯಾಲಯಕ್ಕೆ ಸಿಐಡಿ ಪೊಲೀಸರು ಹಾಜರುಪಡಿಸಿದರು.
ನಿಗಮ ಮಂಡಳಿ ನಿರ್ದೇಶಕ ಎ 1 ಆರೋಪಿ ಪದ್ಮನಾಭ್, ಹಾಗೂ ಮಂಡಳಿ ಅಕೌಂಟೆಂಟ್ ಸುಪರ್ವೈಸರ್ ಪರಶುರಾಮ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಇದನ್ನೂ ಓದಿ-https://suddilive.in/archives/17672