ಸುದ್ದಿಲೈವ್/ಶಿವಮೊಗ್ಗ
ಸರ್ಕಾರಿ ನೌಕರರಿಗೆ 7 ನೇ ವೇತನ ಜಾರಿ ಮಾಡುವ ಕುರಿತು ಜೂನ್ 30 ರವರೆಗೆ ಕಾಯುವುದಾಗಿ ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
7 ನೇ ವೇತನ ಜಾರಿ ಮಾಡಲು ಬೊಮ್ಮಾಯಿ ಸರ್ಕಾರ ಇರುವಾಗಲೆ ಮನವಿ ಸಲ್ಲಿಸಲಾಗಿತ್ತು. ಈಗಿನ ಸರ್ಕಾರ ಮದ್ಯಾಂತರ ವರದಿಯನ್ನ ತರಿಸಿಕೊಂಡಿದೆ. ಲೀಕಸಭೆ ಮತ್ತು ಪರಿಷತ್ ಚುನಾವಣೆ ಮುಗಿದ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.
ಆದರೆ ಸಿದ್ದರಾಮಯ್ಯನವರು ನಡೆಸಿದ್ದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಆದರೆ ಮುಂದಿನ ಸಭೆಯಲ್ಲಿ ಕ್ರಮಕೈಗಪಳ್ಳುವ ತೀರ್ಮಾನ ತೆಗೆದುಕೊಂಡಿತ್ತು.
ಆದರೆ ಈಗ ರಾಜ್ಯ ಸರ್ಕಾರಿ ನೌಕರರ ಸಂಘ ಕ್ರಮ ತೆಗೆದುಕೊಳ್ಳಲು ಗಡುವು ನೀಡಿದೆ. ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಜೂ. 30 ರವರೆಗೆ ಕಾದು ನೋಡಿ ನಂತರದ ತೀರ್ಮಾನದ ಬಗ್ಗೆ ತಿಳಿಸುವುದಾಗಿ ಹೇಳಿದರು. 7 ನೇ ವೇತನ ಜಾರಿ ನಂತರ ಒಪಿಎಸ್ ಬಗ್ಗೆ ಸಂಘ ತೀರ್ಮಾನಿಸಲಿದೆ ಎಂದು ತಿಳಿಸಿದರು.
ಇದನ್ನೂ ಓದಿ-https://suddilive.in/archives/17221