ವೇಶ್ಯವಾಟಿಕೆ ನಡೆಸುತ್ತಿದ್ದ ವಾಸದ ಮನೆಯ ಮೇಲೆ ಪೊಲೀಸ್ ರೈಡ್

ಸುದ್ದಿಲೈವ್/ಶಿವಮೊಗ್ಗ

ವೇಶ್ಯಾವಾಟಿಕೆ ಆರೋಪದ ಮೇರೆಗೆ ವಾಸದ ಮನೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ‌ ಬಂಧಿಸಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯರನ್ನ ರಕ್ಷಿಸಲಾಗಿದೆ.

ನಿನ್ನೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬನಗರದ ವಾಸದ ಮನೆಯೊಂದರಲ್ಲಿ, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ,  ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರಡ್ಡಿ, ಮತ್ತು ಕಾರಿಯಪ್ಪ ಎ.ಜಿ, ಜಿಲ್ಲೆರವರ ಮಾರ್ಗದರ್ಶನದಲ್ಲಿ,

ಡಿವೈ ಎಸ್ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ, ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಶ್ರೀಮತಿ ಚಂದ್ರಕಲಾ, ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ, ದಾಳಿಯಲ್ಲಿ ಸಂತ್ರಸ್ಥ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಲಾಗಿದೆ.

ಶೇಖರ್ ಮೂರ್ತಿ, 45 ವರ್ಷ, ಹೊಸಮನೆ, ಶಿವಮೊಗ್ಗ ಟೌನ್ ಈತನನ್ನು ದಸ್ತಗಿರಿ ಮಾಡಿ ಆರೋಪಿಯ ವಿರುದ್ಧ IMMORAL TRAFFIC PREVENTION ACT ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ-https://suddilive.in/archives/16549

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close