ಸುದ್ದಿಲೈವ್/ಶಿವಮೊಗ್ಗ
ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ
ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ನಲ್ಲಿದ್ದ ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ.
ಬೆಳಗ್ಗೆ 7:30ರ ಸಮಯದಲ್ಲಿ ಅಪಘಾತ ಸಂಭವಿಸಿದ್ದು.
ಬೆಳಿಗ್ಗೆಯಿಂದ ಅತಿಯಾಗಿ ಸುರಿದ ಮಳೆಯಿಂದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರನ್ನು ಸಾಗರ ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲು ಆನಂದಪುರದ 112 ಪೊಲೀಸ್ ಸಿಬ್ಬಂದಿಗಳು ನೆರವಾಗಿದ್ದಾರೆ.ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.
ಇದನ್ನೂ ಓದಿ-https://suddilive.in/archives/16554
Tags:
ಕ್ರೈಂ ನ್ಯೂಸ್