ಇಂಧನ ಬೆಲೆ ಏರಿಕೆ ಮಾಡಿ ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಿದೆ-ಬಿವೈಆರ್

ಸುದ್ದಿಲೈವ್/ಶಿವಮೊಗ್ಗ

ಜನರ ಮೇಲೆ ಸೇಡು ತೀರಿಸಿಕೊಳ್ಳುವ ರೀತಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ ಎಂದು ಸಂಸದ ರಾಘವೇಂದ್ರ ಆರೋಪ ಮಾಡಿದರು.

ಶಿವಮೊಗ್ಗದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದ ಬಿ.ವೈ ರಾಘವೇಂದ್ರ, ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ ಕಾಂಗ್ರೆಸ್ ನೀರಿಕ್ಷೆ ಸುಳ್ಳಾಗಿದೆ. ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ ಮೇಲೆ ಬಿಜೆಪಿಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಯೋಜನೆ ತಮ್ಮ ಕೈಯಿಂದ ಕೊಟ್ಟಂತೆ ಮಾತನಾಡುತ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಸೇಡಿನ‌ ರೀತಿ ಬೆಲೆ ಏರಿಕೆ ಮಾಡಿದೆ ಎಂದು ಗುಡುಗಿದರು.

ಕಾಂಗ್ರೆಸ್ ನ ಲಕ್ಷ್ಮಣ್ ಅವರು ಗ್ಯಾರಂಟಿ ಬಗ್ಗೆ ಮತ್ತೆ ಪರಿಶೀಲನೆ ಮಾಡಬೇಕು ಅಂತ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರ ಬಾಯಲ್ಲಿ ಹಗುರವಾದ ಮಾತುಗಳು ಬರುತ್ತಿವೆ. ಜನ ಸಾಮಾನ್ಯರ ಪ್ರಾಣ ಹಿಂಡಲು ಬೆಲೆ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆಯಿಂದ ಬಡವರ,ರೈತರ ಮೇಲೆ ಪ್ರಭಾವ ಬೀರುತ್ತೆ ಎಂದು ಗುಡುಗಿದರು.

ರೈತರ ಕೃಷಿ ಮೇಲೆ , ಪ್ರವಾಸೋದ್ಯಮದ ಮೇಲೆ ಪ್ರಭಾವ ಬೀರುತ್ತೆದೆ. ಸರ್ಕಾರನೇ ಮತ್ತೆ ಈಗ ಬಸ್ ದರ ಹೆಚ್ಚಳ ಮಾಡುತ್ತಾರೆ. ಡಿಸೇಲ್ ಆಧಾರಿತವಾಗಿ ಮೀನುಗಾರಿಕೆ ಮಾಡುವರ ಮೇಲೆ ಪ್ರಭಾವ ಬೀರುತ್ತದೆ. ಗ್ಯಾರಂಟಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಪ್ರಯತ್ನ ಮುಂದುವರೆದಿದೆ ಎಂದು ದೂರಿದರು.

ಅಂಗನವಾಡಿಯ ಬಾಡಿಗೆ ಕಟ್ಟಡದ ಬಾಡಿಗೆ ಸಹ ನೀಡದ ಉದಾಹರಣೆಗಳು ಕಣ್ಣುಮುಂದೆ ಇವೆ. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ. ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಕೊಳ್ಳಲು ಕಾಂಗ್ರೆಸ್ ಹೊರಟಿದೆ. ಬೆಲೆ ಏರಿಕೆ ವಿರುದ್ಧ ಬಿಜೆಪಿಯಿಂದ  ಹೋರಾಟ ಮಾಡಲಿದ್ದೇವೆ ಎಂದರು.

ಗ್ಯಾರಂಟಿ ನೆಪದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ. ಗ್ಯಾರಂಟಿ ಹೆಸರು ಹೇಳಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕಡೆಗಣಿಸಲಾಗಿದೆ. ಸರ್ಕಾರದ ನಿರ್ಧಾರವನ್ನು ಬಿಜೆಪಿ ಖಂಡಿಸುತ್ತದೆ. ಎಲ್ಲಾ ಕ್ಷೇತ್ರದ ಮೇಲೂ ಪೆಟ್ರೋಲ್ ಬೆಲೆ ಏರಿಕೆ ಪ್ರಭಾವ ಬೀರಲಿದೆ. ರಾಜಕೀಯ ದ್ವೇಷ ಬಿಟ್ಟು ಪೆಟ್ರೋಲ್, ಡಿಸೇಲ್ ದರ ಕಡಿಮೆ ಮಾಡಬೇಕು ಎಂದು ಸಂಸದರು ಆಗ್ರಹಿಸಿದರು.

ಇದನ್ನೂ ಓದಿ-https://suddilive.in/archives/17013

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close