ಸುದ್ದಿಲೈವ್/ಶಿವಮೊಗ್ಗ
ಅಡಿಕೆ ತೋಟದಲ್ಲಿ ಗಾಂಜಾ ಬೆಳೆದ ಆರೋಪದ ಮೇರೆಗೆ ಆರೋಪಿಯೋರ್ವನನ್ನ ಬಂಧಿಸಲಾಗಿದ್ದು, ಆತನಿಂದ ಲಕ್ಷಾಂತರ ಮೌಲ್ಯದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ.
ನಿನ್ನೆ ತೀರ್ಥಹಳ್ಳಿ ತಾಲೂಕು ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿಯು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂಬ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ 9 ಕೆಜಿ 524 ಗ್ರಾಂ ಗಾಂಜಾ ಪತ್ತೆಯಾಗಿದೆ.
ಗಾಂಜಾ ಬೆಳೆದಿರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇರೆಗೆ ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡೊಷನಲ್ ಎಸ್ಪಿಗಳಾದ ಅನಿಲ್ ಕುಮಾರ್ ಭೂಮಾರೆಡ್ಡಿ, ಕಾರಿಯಪ್ಪ ಎ.ಜಿ,ರವರ ಮಾರ್ಗದರ್ಶನದಲ್ಲಿ , ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತರ, ರವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವನ್ನ ರಚಿಸಿಕೊಂಡು ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000/- ರೂಗಳ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನ ಬಂಧಿಸಿ ಮುಂದಿನ ಕ್ರಮ ಜರುಗಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲಗಲಿ ದೂರು ದಾಖಲಿಸಿಕೊಂಡು ತನಿಝೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ-https://suddilive.in/archives/16764