ಗುತ್ತಿಗೆ ಆಧಾರದ ನೇಮಕಾತಿಗೆ ನೇರ ಸಂದರ್ಶನ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜೂನ್ 24 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜೂ.24 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‍ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನವಾಗಿ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/17349

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close