ಸುದ್ದಿಲೈವ್/ಶಿವಮೊಗ್ಗ:
ಬಗರ್‌ಹುಕುಂ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ತಾಲೂಕು ವ್ಯಾಪ್ತಿಯಲ್ಲಿ ಬಗರ್‌ಹುಕುಂ ಸಾಗುವಳಿದಾರರು ೫೩, ೫೭ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ ಹಲವು ವರ್ಷಗಳಾದರೂ ಇದುವರೆಗೂ ಸಾಗುವಳಿ ಚೀಟಿ ನೀಡಿಲ್ಲ. ಇದರಿಂದ ಸಾಗುವಳಿದಾರರಿಗೆ ತುಂಬಾ ತೊಂದರೆಯಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ಬಗ???ಹುಕುಂ ಕಮಿಟಿ ರಚನೆ ಮಾಡಿ ಹಕ್ಕುಪತ್ರ ನೀಡಲು ಮುಂದಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಶಿವಮೊಗ್ಗ ತಾಲೂಕು ಗ್ರಾಪಂಗಳ ವ್ಯಾಪ್ತಿಯಲ್ಲಿ ೯೪ಡಿ ಅಡಿಯಲ್ಲಿ ಸರ್ವೇ ಕೂಡ ಮುಗಿದಿದೆ. ಯಾರೋ ಕೆಲವರಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. ಹಸೂಡಿ ಗ್ರಾಮದ ಸ.ನಂ. ೧೩೯ರಲ್ಲಿ ೯೨.೨೦ ಎಕರೆ ಸರ್ಕಾರಿ ಕೆರೆ ಜಮೀನನ್ನು ಒತ್ತುವರಿ ಮಾಡಿರುವ ಬಗ್ಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಒತ್ತುವರಿದಾರರು ಜಮೀನು ಬಿಟ್ಟು ಕೊಡಲು ಒಪ್ಪಿದ್ದು ಸರ್ವೇ ಮಾಡಿ ಕೆರೆ ಸುತ್ತ ಟ್ರಂಚ್ ಹಾಕಿಸಿಕೊಡಬೇಕು. ಮತ್ತು ಬಗ???ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ. ಸಂಜಯ್ ಕುಮಾರ್, ಪ್ರಮುಖರಾದ ಕೆ. ಸುಂದರ್, ಆರ್ಮುಗಂ, ಕುಬೇಂದ್ರಪ್ಪ ಆನವೇರಿ, ಮೊಹಮ್ಮದ್ ಹುಸೇನ್, ಎಸ್. ಗೀತಾ, ವಿಜಯ, ಧನಭಾಗ್ಯ, ಜಯಕುಮಾರಿ, ಸುರೇಶ್, ಮಂಜುಳಾ ಮೊದಲಾದವರಿದ್ದರು.
ಇದನ್ನೂ ಓದಿ-https://suddilive.in/archives/17653