ಎಂಎಲ್ ಸಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಸರ್ಜಿ

ಸುದ್ದಿಲೈವ್/ಬೆಂಗಳೂರು

ನೂತನ ವಿಧಾನ ಪರಿಷತ್ ಸದಸ್ಯರಾಗಿ ಡಾ.ಧನಂಜಯ ಸರ್ಜಿ ಪ್ರಮಾಣ ವಚನ ಸ್ವೀಕಾರಿಸಿದರು.

ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಅವರ ಸಮ್ಮುಖದಲ್ಲಿ ನೂತನ ವಿಧಾನ ಪರಿಷತ್ ಶಾಸಕರಾಗಿ ಡಾ. ಧನಂಜಯ ಸರ್ಜಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಭರ್ಜರಿ ಗೆಲುವಿನ ಮೂಲಕ ಐತಿಹಾಸಿಕ ಗೆಲವು ಸಾಧಿಸಿದ ಡಾ.ಸರ್ಜಿ ಅವರ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅವರ ಅಭಿಮಾನಿ ಬಳಗ ಸಂತಸ ವ್ಯಕ್ತಪಡಿಸಿದೆ.

ಇದನ್ನೂ ಓದಿ-https://suddilive.in/archives/17633

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close