ಸುದ್ದಿಲೈವ್/ಶಿವಮೊಗ್ಗ
ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಹೆಚ್ ಪಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರಿಗೆ ಮನವಿ ಸಲ್ಲಿಸಿದೆ.
ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.
ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲಿಗೆ ಅವಕಾಶವಿದೆ. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ (ಕುರ್ಬಾನಿ) ನಿಷೇಧವಿದೆ.
ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ನಾಗಿ ತಡೆಯಲು ನಾವು ಮನವಿ ಮಾಡುತ್ತಿದ್ದೇವೆ. ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ಬಕ್ರೀದ್ ವರೆಗೂ ನಾಕಾಬಂದಿ ಹಾಕುವಂತೆ. ಬಕ್ರೀದ್ ವರೆಗೆ ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡಬೇಕು ಎಂದು ಸಂಘಟನೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅದನ್ನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಇರುವ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಹಿಂದೆ ನಡೆದಲೆಲ್ಲ ನಿಗಾ ಇಡುವಂತೆ ಆಗ್ರಹಿಸಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಬಜರಂಗದಳದ ಮುಖಂಡರಾದ ರಾಜೇಶ್ ಗೌಡ, ಅಂಕುಶ್, ಸುರೇಶ್ ಬಾಬು ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/16693