ಸುದ್ದಿಲೈವ್/ರಿಪ್ಪನ್ ಪೇಟೆ
ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ.
ಮಾರುತಿ ಎರಟಿಗಾ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ.
ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ-https://suddilive.in/archives/17710
Tags:
ಕ್ರೈಂ ನ್ಯೂಸ್