ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡಯ ಮೇಲೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಿದೆ. ನಿಷೇಧದ ಮಧ್ಯೆಯೂ ಸೀಗೆಹಟ್ಟಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ದೊಡ್ಡಪೇಟೆ ಪೊಲೀಸರು ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಕ್ಕೆಪಡೆಯಲಾಗಿದೆ.
ಚುನಾವಣೆ ಸಂಬಂಧ ಜೂ. 1 ರಿಂದ ಸಂಜೆ 4 ಗಂಟೆಯಿಂದ ಜೂ.3 ಗಂಟೆ ಸಂಜೆ ನಾಲ್ಕು ಗಂಟೆಯ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೆ ನಿನ್ನೆ ಸೀಗೆಹಟ್ಟಿಯಲ್ಲಿ ಮದ್ಯ ಮಾರಾಟ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.
ನಿನ್ನೆ ದಾಳಿ ನಡೆಸಿದ ಪೊಲೀಸರು ಬರಿಗೈಯಲ್ಲಿ ಬಂದಿದ್ದರು. ಆದರೆ ಇಂದು ಖಡಕ್ ದಾಳಿ ನಡೆಸಿದ್ದಾರೆ. ಅಕ್ರಮ ಮದ್ಯ ಮಾರಾಟಗಾರನ ಮತ್ತು ಪತ್ತೆಯಾಗಿರುವ ಮದ್ಯವೆಷ್ಟು ಎಂಬುದರ ಬಗ್ಗೆ ಖಚಿತ ಮಾಹಿತಿ ತಿಳಿದು ಬರಬೇಕಿದೆ.
ಇದನ್ನೂ ಓದಿ-https://suddilive.in/archives/16156