ಕುಮಾರ್ ಬಂಗಾರಪ್ಪ ಟ್ವೀಟ್ ಮಾಡಿ ಟಾಟಾ ಮಾಡಿದ್ದೇಕೆ?

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ‌ ಗೆಲುವಿನ‌ನಾಗಲೋಟ ಮುಂದು ವರೆಸಿದ್ದಾರೆ. ಗೆಲುವಿನ ಅಂತರವನ್ಬೂ ಹೆಚ್ಚಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಚಿವ ಕುಮಾರ ಬಂಗಾರಪ್ಪ ಟ್ವೀಟ್ ಮಾಡಿ ಸಚಿವ ಮಧು ಬಂಗಾರಪ್ಪ ಮತ್ತು ನಟ ಶಿವರಾಜ್ ಕುಮಾರ್ ದಂಪತಿಗಳಿಗೆ ಟಾಟಾ ಮಾಡಿದ್ದಾರೆ.

ಅವರ ಟ್ವೀಟ್ ಹೀಗಿದೆ. ಕನ್ನಡದ ಕಣ್ಮಣಿ Dr. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ.

ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು.

ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ.
ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು, ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ

ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು, ಹಿರಿಯ -ಕಿರಿಯ ಪದಾಧಿಕಾರಿಗಳು, ಸಂಘಟನೆಯಲ್ಲಿ ತೊಡಗಿಸಿಕೊಂಡ ಬ್ರಿಗೇಡ್/ಶಿಸ್ತಿನ ಸಿಪಾಯಿಗಳು
ಹಗಲಿರುಲೆನ್ನದೆ ದುಡಿದು B Y ರಾಘವೇಂದ್ರರಿಗೆ ಅತ್ಯಧಿಕ ಬಹುಮತದಿಂದ ವಿಜಯಶಾಲಿಯನ್ನಾಗಿಸಿದ್ದಾರೆ ಅವರೆಲ್ಲರಿಗೂ ನನ್ನ ನಮನಗಳು ಎಂದಿದ್ದಾರೆ.

ಮಧು ರಾಜೀನಾಮೆ ನೀಡಲಿ

ಕರ್ನಾಟಕ ಕಂಡ ಧೀಮಂತ ರಾಜಕಾರಣಿ ಬಡವರ ಬಂಧು ಎಂಬ ಸಾರ್ಥಕ ಬಿರದನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ

ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತಬಂದುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ಧೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿಯ ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು

ಇವರ ಆಡಳಿತ ವೈಖರಿಯು ಅನುಕರಣೀಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು.
ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ, ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ.

ಇಂತಹ ಒಬ್ಬ ಧಿರೋದ್ಧಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆ ಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ.

ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ! ಎಂದು ಟ್ವೀಟ್ ಮಾಡಿದ್ದಾರೆ.

ಇದನ್ಬೂ ಓದಿ-https://suddilive.in/archives/16246

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close