ಸುದ್ದಿಲೈವ್
ಖಾದ್ಯ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ನಿಷೇಧದ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಅನ್ವಯ 7 ವರ್ಷಗಳಿಂದ ಜೀವಾವಧಿ ವರೆಗೆ ಜೈಲುಶಿಕ್ಷೆ ಹಾಗು 10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ರಾಜ್ಯದ ಎಲ್ಲಾ ಕಬಾಬ್ ತಯಾರಿಸುವ ಮತ್ತು ಮಾರಾಟ ಮಾಡುವ ಆಹಾರ ಉದ್ದಿಮೆದಾರರು ಈ ಆದೇಶವನ್ನು ತಕ್ಷಣದಿಂದಲೇ ಪಾಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ-https://suddilive.in/archives/17752
Tags:
ನಗರ ಸುದ್ದಿಗಳು