ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್ ಭೇಟಿ

ಸುದ್ದಿಲೈವ್/ಶಿವಮೊಗ್ಗ

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ ಹೆಚ್ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲ್ಲೂಕಿನ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್‍ಪಿ ಉಮೇಶ್ ಈಶ್ವರನಾಯ್ಕ, ಪೊಲೀಸ್ ನಿರೀಕ್ಷಕ ಪ್ರಕಾಶ್ ಮತ್ತು ಸಿಬ್ಬಂದಿಗಳೊಂದಿಗೆ ಜೂ.25 ರಂದು ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದರು.

ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಹೊರ ಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್‍ಗಳ ಮಾಹಿತಿ ಪಡೆದರು. ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‍ಗಳನ್ನು ಪರಿಶೀಲನೆ ಮಾಡಿದರು. ಮತ್ತು ನೋಂದಣಿ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರೊಂದಿಗೆ ಚರ್ಚಿಸಿ ಮಾಹಿತಿಯನ್ನು ಪಡೆದರು.

ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಕುರಿತು ಹಿರಿಯ ಉಪನೋಂದಣಾಧಿಕಾರಿ ಧನರಾಜ್ ಮತ್ತು ದಿನೇಶ್ ರವರಿಗೆ ತಿಳಿಸಿ, ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ-https://suddilive.in/archives/17760

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close