ಸುದ್ದಿಲೈವ್/ಶಿವಮೊಗ್ಗ
ಬಿಜೆಪಿ ಹಿರಿಯ ಮುಖಂಡರಾದ ಎಂ.ಬಿ. ಭಾನುಪ್ರಕಾಶ್ ಅವರ ಅಗಲಿಕೆ ಕಾರ್ಯಕರ್ತರಿಗೆ ದಿಗ್ಭ್ರಮೆ ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸಮೀಪದ ಮತ್ತೂರಿನಲ್ಲಿರುವ ಎಂ.ಬಿ. ಭಾನುಪ್ರಕಾಶ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾನುಪ್ರಕಾಶ್ ಅವರ ಇಡೀ ಕುಟುಂಬವೇ ಸಂಘಕ್ಕಾಗಿ ದುಡಿದ ಕುಟುಂಬ. ಯಾರಿಗೂ ನೋಯಿಸದೆ ಪರಿಶುದ್ಧ ರಾಜಕೀಯ ಮಾಡಿಕೊಂಡು ಬಂದವರು. ಭಾನುಪ್ರಕಾಶ್ ಅವರ ಅಕಾಲಿಕ ನಿಧನ ಸಂಘಟನೆಗೆ ತುಂಬಲಾರದ ನಷ್.ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪ್ರೇರಣೆ ನಮ್ಮ ಜೊತೆಗೆ ಇರಲಿದೆ ಎಂದು ಹೇಳಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನವರು ಬರಬೇಕಿತ್ತು. ಕಾರಣಾಂತರದಿಂದ ಬರಲು ಸಾಧ್ಯ ಆಗಿಲ್ಲ. ಅವರ ನುಡಿ ಮುತ್ತುಗಳು ಎಂದಿಗೂ ನಮ್ಮ ಜೊತೆಗೆ ಇರುತ್ತದೆ. ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ್ದೆ. ರೇಣುಕಾಸ್ವಾಮಿ ಅವರ ಪತ್ನಿಗೆ ಉದ್ಯೋಗ ನೀಡಬೇಕು. ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇನೆ. ಪ್ರಕರಣದಲ್ಲಿ ಯಾರದೂ ಒತ್ತಡವಿಲ್ಲದೆ ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ತನಿಖೆ ದಿಕ್ಕು ತಪ್ಪದೆ ಹಾಗೇ ನಡೆಯಬೇಕು ಎಂದರು.
ಪೆಟ್ರೋಲ್, ಡಿಸೇಲ್ ದರ ಏರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ. ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ. ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸರ್ಕಾರ ಸಿಲುಕಿಕೊಂಡಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ದೂರುವ ಚಾಲಿ ರೂಡಿಸಿಕೊಂಡಿದ್ದಾರೆ. ಪ್ರತಿಯೊಂದರ ದರ ಏರಿಕೆ ಮಾಡುತ್ತಿದ್ದೀರಾ? ಅಬಕಾರಿ ದರ ಸಹ ಜಾಸ್ತಿ ಮಾಡಿದ್ದೀರಾ?ರಾಜ್ಯದಲ್ಲಿ ಅಭಿವೃದ್ಧಿ ಸೂನ್ಯವಾಗಿದೆ. ಇದನ್ನು ಆಡಳಿತ ಪಕ್ಷದ ನಾಯಕರೇ ಹೇಳುತ್ತಿದ್ದಾರೆ. ಜನಪರ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಮಾತು ಎತ್ತೀದರೆ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುತ್ತಾರೆ. ಅನುಭವಿ ಮುಖ್ಯಮಂತ್ರಿಗಳು ಇವತ್ತು ಆಡಳಿತ ನಡೆಸಲು ಪರದಾಡುತ್ತಿದ್ದಾರೆ. ಇದರ ಮಧ್ಯೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಒಂದು ಕಡೆ ಭ್ರಷ್ಟಾಚಾರ ಇನ್ನೊಂದು ಕಡೆ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಜನ ಸಾಮನ್ಯರ ಪಾಲಿಗೆ ಸರ್ಕಾರ ಸತ್ತೋಗಿದೆ ಆರ್ಥಿಕ ಶಕ್ತಿ ಕೊಡುವ ಯೋಜನೆಯ ಹಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ. ಮುಂದಿನ ಗುರುವಾರ ರಸ್ತೆ ತಡೆ ಹೋರಾಟ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆಡಳಿತ ಪಕ್ಷದ ಶಾಸಕರು ಹತಾಶರಾಗಿದ್ದಾರೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿಕೊಂಡು ಒಡಾಡಲು ಆಗುತ್ತಿಲ್ಲ. ಸರ್ಕಾರ ಬಂದ ಮೇಲೆ ಎಷ್ಟು ಕಿ.ಲೋ ರಸ್ತೆ ಮಾಡಿದ್ದಾರೆ? ಸರ್ಕಾರದ ಹಣ ಎಲ್ಲಿಗೆ ಹೋಗುತ್ತಿದೆ? ಎಂದು ಪ್ರಶ್ನಿಸಿದರಲ್ಲದೆ, ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪೆಟ್ರೋಲ್ ದರ ಇಳಿಸುವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು.