ಸುದ್ದಿಲೈವ್/ಶಿವಮೊಗ್ಗ
ಡಾ.ಧನಂಜಯ ಸರ್ಜಿ ಗೆಲುವಿಗಾಗಿ ದೇವರಿಗೆ ಪೂಜಾ ಕೈಂಕರ್ಯಗಳು ಮುಂದುವರೆದಿದೆ. ನಿನ್ನೆ ಡಾ.ಸರ್ಜಿ ಅಭಿಮಾನಿಗಳ ಬಳಗ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಇವತ್ತು ಖುದ್ದು ಸರ್ಜಿ ಅವರೇ ಶೃಂಗೇರಿ ಶಾರದಾಂಬೆಗೆ ಪೂಜೆ ಸಲ್ಲಿಸಿದರು.
ಶನಿವಾರ ನೈರುತ್ಯ ಪದವೀಧರರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಜ್ಞಾನ ದೇವತೆ ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಮತ್ತು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಆಶೀರ್ವಾದ ಪಡೆದರು
ಈ ವೇಳೆ ಮಾಜಿ ಸಚಿವರಾದ ಡಿ ಎನ್ ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ ಎಚ್ ಮಾಲತೇಶ್, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ-https://suddilive.in/archives/15990
Tags:
ರಾಜಕೀಯ ಸುದ್ದಿಗಳು