ಜು.21 ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಸುದ್ದಿಲೈವ್/ಶಿವಮೊಗ್ಗ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಜ್ಯದ ಎಲ್ಲಾ ಅಧ್ಯಕ್ಷರ ಸ್ಥಾನಕ್ಕೆ ಜು.21 ರಂದು ಚುನಾವಣೆ ನಡೆಯಲಿದೆ. ಅದರಂತೆ ಶಿವಮೊಗ್ಗದಲ್ಲಿ ಅಧ್ಯಕ್ಷಸ್ಥಾನಕ್ಕೆ ಆಯ್ಕೆಯಾಗಲಿದ್ದಾರೆ.

ಜಿಲ್ಲೆಯಲ್ಲಿ 3115 ಜನ ಮತದಾರರಿದ್ದು ಇವರು ಗಳು ನಿರ್ದೇಶಕರನ್ನ ಆಯ್ಕೆ ಮಾಡಲಿದ್ದಾರೆ. 3115 ಜನರಲ್ಲಿ 20 ಪುರುಷರು 10 ಮಹಿಳೆಯರು ಆಯ್ಕೆಯಾಗಲಿದ್ದು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಒಟ್ಟು 31 ಜನ ಆಯ್ಕೆಯಾಗಲಿದ್ದಾರೆ. ಈಗಾಗಲೇ 30 ಜನ ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ.

ಜಿಲ್ಲೆ ಮತ್ತು ತಾಲೂಕು ಅಧ್ಯಕ್ಷರ ಸ್ಥಾನಕ್ಕೆ ಜು.21 ರಂದು ನಡೆಯಲಿದೆ. ಜಿಲ್ಲೆಯ ಅಧ್ಯಕ್ಷರ ಸ್ಥಾನಕ್ಕೆ ರುದ್ರಮುನಿ ಸಜ್ಜನ್, ಅಶ್ವಿನ್ ಕೆಪಿ, ನಂಜಪ್ಪ ಈ ಮೂವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಇದರಲ್ಲಿ ರುದ್ರಮುನಿ ಸಜ್ಜನ್ ಚಿರಪರಿಚಿತರಾಗಿದ್ದಾರೆ. ವೀರಶೈವ ಕಲ್ಯಾಣ ಮಂದಿರದ ಪಕ್ಕವಿರುವ ಬಸವೇಶ್ವರ ಸ್ಕೂಲ್ ಆಫ್ ಎಜುಕೇಷನ್ ಸೊಸೈಟಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ತಾಲೂಕು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹೊಸನಗರ ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾಕ್ಕೆ ಶಿಕಾರಿಪುರದಲ್ಲಿ ಅಧ್ಯಕ್ಷರ ಆಯ್ಕೆಯಾಗಿದೆ. ತೀರ್ಥಹಳ್ಳಿಯಲ್ಲಿ ಯಾರು ಸ್ಪರ್ಧಿಸುತ್ತಿಲ್ಲ. ಭದ್ರಾವತಿ, ಸಾಗರದಲ್ಲಿ ಚುನಾವಣೆ ನಡೆಯಬೇಕಿದೆ. ಜಿಲ್ಲೆಗೆ ಚುನಾವಣೆ ಅಧಿಕಾರಿಯಾಗಿ ನೇಮಕ ವಿಶ್ವನಾಥಯ್ಯ, ತಾಲೂಕಿಗೆ ಉಜ್ಜನಪ್ಪ ಬಸಯ್ಯ ನೇಮಕರಾಗಿದ್ದಾರೆ.

ಇದನ್ನೂ ಓದಿ-https://suddilive.in/archives/18924

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು