ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ಪಾಲ್ಗೊಂಡು ಗಮನ ಸೆಳೆದರು.
ಈ ವೇಳೆ ಮಾತನಾಡಿರುವ ಡಾ. ಸರ್ಜಿ, ಪೋಷಕರು, ಶಿಕ್ಷಕರು ಮತ್ತು ವೈದ್ಯರು ನಮ್ಮ ಜೀವನದ ಹೀರೋಗಳು ನಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವಲ್ಲಿ ಆತ್ಮ ವಿಶ್ವಾಸದಿಂದ ಶ್ರಮ ಪಡಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.
ಈ ವೇಳೆ ವೈದ್ಯರಾಗಿರುವ ಡಾ.ಸರ್ಜಿ ಅವರು ಈಗ ನೂತನ ಶಾಸಕರಾಗಿರುವುದರಿಂದ ಸನ್ಮಾನಿಸಲಾಯಿತು.
ಈ ವೇಳೆ ಶಾಲಾ ಮುಖ್ಯೋಪಾಧ್ಯಯರಾದ ಶ್ರೀ ತೀರ್ಥೇಶ್ , ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಶೋಭಾ ವೆಂಕಟರಮಣ, ಹಿರಿಯ ಶಿಕ್ಷಕರಾದ ಗಜೇಂದ್ರ ಅವರು , ಪೋಷಕರಾದ ಮುರುಳೀಧರ್ ರಾವ್ ಕುಲಕರ್ಣಿ, ಆಡಳಿತ ವರ್ಗ, ಶಿಕ್ಷಕ ವೃಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಇದನ್ನೂ ಓದಿ-https://suddilive.in/archives/18252