ಗ್ರಾಮಾಂತರ ಭಾಗದಲ್ಲಿ ಸರಣಿ ಅಪಘಾತ |
ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಾರುಗಳ ನಡುವೆ ಸರಣಿ ಅಪಘಾತವಾಗಿದೆ. ಸ್ಥಳಕ್ಕೆ ಪೊಲೀಸರು ಎಂಟ್ರಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅದೃಷ್ಟಕ್ಕೆ ಯಾರಿಗೂ ಘಟನೆಯಲ್ಲಿ ಗಾಯಗಳಾಗಿಲ್ಲ. ಆದರೆ ವಾಹನಗಳು ಜಖಂಗೊಂಡಿದೆ.
ರಸ್ತೆ ಮೇಲೆ ಉರುಳಿ ಬಿದ್ದ ಪಿಕಪ್
ಸಾಗರ ರಸ್ತೆಯ ಪಕ್ಕದಲ್ಲಿ ಪಿಕಪ್ ವಾಹನವೊಂದು ಉರುಳಿ ಬಿದ್ದಿದೆ. ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿತ್ತು. ವಾಹನ ಸವಾರರು ಪೊಲೀಸರಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಬಗ್ಗೆ ವರದಿಯಾಗಿದೆ.
ಇತ್ತ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ KSRTC ಬಸ್ ಹಾಗೂ ಓಮಿನಿ ನಡುವೆ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ ಪರಿಶೀಲನೆ ನಡೆಸಿ ವಾಹನಗಳನ್ನು ಠಾಣೆಗೆ ಕಳುಹಿಸಿ ಮಾಹಿತಿಯನ್ನು ಠಾಣೆಗೆ ನೀಡಿದ್ದಾರೆ. ಇನ್ನೂ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ
ಇದನ್ನೂ ಓದಿ-https://www.suddilive.in/2024/07/25.html