ಸುದ್ದಿಲೈವ್/ಸೊರಬ
ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬ ನೀರು ಪಾಲಾಗಿರುವ ಘಟನೆ ಸೊರಬ ತಾಲೂಕಿನಲ್ಲಿ ನಡೆದಿದೆ. ಆತನಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸೊರಬ ತಾಲೂಕು ಯಡಗೊಪ್ಪ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಉದ್ರಿ ಗ್ರಾಮದ ಯಲ್ಲಪ್ಪ (50) . ಭಾರಿ ಮಳೆಯಿಂದಾಗಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು. ಇದರಿಂದ ನೀರು ರಭಸವಾಗಿ ಹರಿಯುತ್ತಿತ್ತು. ಮೀನು ಹಿಡಿಯಲು ಬಲೆ ಹಾಕಿದ್ದ ಯಲ್ಲಪ್ಪ ಕೆರೆಯ ನೀರು ಪಾಲಾಗಿದ್ದಾರೆ.
ಯಲ್ಲಪ್ಪ ಅವರ ಸಹೋದರ, ಮಕ್ಕಳು ಕೆರೆ ಬಳಿ ಇದ್ದರು ಎನ್ನಲಾಗಿದೆ. ಆದರೆ ನೀರಿನ ರಭಸಕ್ಕೆ ಯಲ್ಲಪ್ಪ ಅವರ ರಕ್ಷಣೆ ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಹಳ್ಳ – ಕೊಳ್ಳಗಳು, ಕೆರೆ, ಹೊಳೆಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಸಂದರ್ಭ ಹತ್ಮೀನು ಮತ್ತು ಮೀನು ಹಿಡಿಯಲು ಜನ ಕೆರೆ, ನದಿಗಳಿಗೆ ಇಳಿಯುತ್ತಿದ್ದಾರೆ. ಇದರಿಂದ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ ಕೆರೆ, ನದಿಗಳಿಗೆ ಇಳಿಯದಂತೆ ಎಚ್ಚರ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಇದನ್ನೂ ಓದಿ