ಸುದ್ದಿಲೈವ್/ಶಿವಮೊಗ್ಹ
ಇತ್ತೀಚೆಗೆ ಕೋಣಂದೂರಿನಿಂದ ಗೂಡ್ಸ್ ವಾಹನದಲ್ಲಿ ಬಂದಿದ್ದ ತಿಮ್ಮಪ್ಪ ಟಿ ಎನ್(41), ರವರು ತಮ್ಮ ಅಂಗಡಿಗೆ ವಸ್ತುಗಳನ್ನು ತರಲು ಶಿವಮೊಗ್ಗಕ್ಕೆ ಬಂದಿದ್ದು, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿ ಆರ್ ಎಲ್ ಟ್ರಾನ್ಸ್ಪೋರ್ಟ್ ಕಛೇರಿಯ ಮುಂದೆ ವಾಹನ ನಿಲ್ಲಿಸಿ ಪಾರ್ಸೆಲ್ ತರಲು ಹೋದಾಗ ತಿಮ್ಮಪ್ಪ ರವರ ವಾಹನದಲ್ಲಿದ್ದ ಹಣ ಕಳುವಾಗಿತ್ತು.
ಪರಿಚಯಸ್ಥನಾದ ನರಸಿಂಹಮೂರ್ತಿ ಎಂಬ ವ್ಯಕ್ತಿಯು ಗೂಡ್ಸ್ ವಾಹನದ ಡ್ಯಾಷ್ ಬೋರ್ಡ್ ನಲ್ಲಿ ಇಟ್ಟಿದ್ದ 1,50,000/-ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾನೆಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಕಳುವಾದ ನಗದು ಹಣ ಮತ್ತು ಆರೋಪಿಯ ಪತ್ತೆಗಾಗಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ, ಬಾಬು ಆಂಜಿನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗರವರ ಮೇಲ್ವಿಚಾರಣೆಯಲ್ಲಿ ರವಿ ಪಾಟೀಲ್, ಪಿ.ಐ. ದೊಡ್ಡಪೇಟೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ,
ನಾಗರಾಜ್ ಎಎಸ್ಐ, ಹೆಚ್ ಸಿ ರವರಾದ ಪಾಲಾಕ್ಷ ನಾಯ್ಕ, ಲಚ್ಚಾನಾಯ್ಕ್, ಸಿಪಿಸಿ ರವರಾದ ಚಂದ್ರನಾಯ್ಕ, ಗುರುನಾಯ್ಕ, ನಿತಿನ್, ಪುನೀತ್ರಾವ್ ಮತ್ತು ಪ್ರಕಾಶ್ ರವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
ತನಿಖಾ ತಂಡವು ಪ್ರಕರಣದ ಆರೋಪಿ ನರಸಿಂಹಮೂರ್ತಿ, 34 ವರ್ಷ, ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ರೂ 1,30,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ. ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.