ಕಾಗೋಡು ತಿಮ್ಮಪ್ಪನವರ ಆರೋಗ್ಯ ವಿಚಾರಿಸಿದ ನಾಯಕರು

ಅನಾರೋಗ್ಯ ಹಿನ್ನಲೆ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು,ಆರೋಗ್ಯ ವಿಚಾರಿಸಿದ ಸಚಿವರು

 

ಸುದ್ದಿಲೈವ್/ಶಿವಮೊಗ್ಗ


ಅನಾರೋಗ್ಯದ ಹಿನ್ನಲೆಯಲ್ಲಿ ಕಾಗೋಡು ತಿಮ್ಮಪ್ಪರ ಆರೋಗ್ಯ ವಿಚಾರಿಸಲು ರಾಜಕೀಯ ನಾಯಕರ ದಂಡು ಹರಿದು ಬರುತ್ತಿದೆ.


ಮಧು ಬಂಗಾರಪ್ಪ ಭೇಟಿ


ಅನಾರೋಗ್ಯದ ಕಾರಣದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ  ಮಾಜಿ ವಿಧಾನಸಭಾ ಅಧ್ಯಕ್ಷರಾದ ಸನ್ಮಾನ್ಯ ಕಾಗೋಡು ತಿಮ್ಮಪ್ಪನವರನ್ನು ಸಚಿವ ಮಧು ಬಂಗಾರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಅನಾರೋಗ್ಯದ ವೇಳೆ  ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಚಿವರೊಂದಿಗೆ ಕಾಗೋಡು ತಿಮ್ಮಪ್ಪ ಚರ್ಚಿಸಿದರು. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ  ರೈತರ ಸಮಸ್ಯೆಗಳ ಬಗ್ಗೆ ಇತ್ತೀಚಿಗೆ ನಡೆದ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.


ಹಾಲಪ್ಪ ಭೇಟಿ

ಆರೋಗ್ಯ ವಿಚಾರಿಸಿದ ಹರತಾಳು ಹಾಲಪ್ಪ


ಕಳೆದ ಕೆಲ ದಿನಗಳಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್. ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಕಾಗೋಡರ ಆರೋಗ್ಯ ವಿಚಾರಿಸಿದರು.


ಇದನ್ನೂ ಓದಿ-https://www.suddilive.in/2024/07/blog-post_719.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close