ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಸುದ್ದಿಲೈವ್/ಶಿವಮೊಗ್ಗ

ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ಯುವತಿಯನ್ನು ಜೂನ್ 30 ರಂದು ಕಾಣೆಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಕೆಲಸಕ್ಕೆಂದು ಹೊರಗೆ ಹೋದ ಪೂಜಾ ಮನೆಗೆ ವಾಪಾಸ್ಸಾಗಿರುವುದಿಲ್ಲ.

ನಾಲೂರಿನ ಮಣಿ ಎಂಬಾತ ಕೊಲೆ ಮಾಡಿ ಹೊಂಡಕ್ಕೆ ತಳ್ಳಿದ್ದೇನೆ ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆಂದು ಮೂಲಗಳ ಪ್ರಕಾರ ತಿಳಿದು ಬಂದಿದೆ. ಶನಿವಾರ ರಾತ್ರಿ ಆತನನ್ನು ಸ್ಥಳಕ್ಕೆ ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆದರೆ ಮೃತಳಿಗೂ ಹಾಗೂ ಕೊಲೆಗಾರನಿಗೂ ಇರುವ ಲಿಂಕ್ ಏನು ಎಂಬುದು ತಿಳಿದು ಬರಬೇಕಿದೆ.

ಇದನ್ನೂ ಓದಿ-https://suddilive.in/archives/18680

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close