ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಯುವ ಜಾತ್ಯಾತೀತ ಜನತಾದಳ ಮನವಿ

ಸುದ್ದಿಲೈವ್/ಶಿವಮೊಗ್ಗ

ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ವಿರುದ್ದ ಯುವ ಜಾತ್ಯಾತೀತ ಜನತಾದಳ ನಗರ  ಅಧ್ಯಕ್ಷ ಸಂಜಯ್ ಕಶ್ಯಪ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಗ್ರಾಮಿಣ ಭಾಗದಿಂದ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿಧ್ಯಾರ್ಥಿಗಳು ಶಿಕ್ಷಣವನ್ನು ಪಡೆಯಬೇಕೆಂಬ ಆಶಯವನ್ನು ಇಟ್ಟುಕೊಂಡು ನಗರ ಪ್ರದೇಶಗಳಿಗೆ ಬರುತ್ತಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಆದ್ಯ ಕರ್ತವ್ಯವಾಗಿದೆ.

ಆದರೆ ಕರ್ನಾಟಕ ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಡ ಶಾಲೆಗಳು ಪ್ರಾರಂಬವಾದ ಮೂರು ತಿಂಗಳುಗಳ ವರೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ ಜೂನ್ ತಿಂಗಳಲ್ಲಿ ಶಾಲೆ-ಕಾಲೇಜುಗಳು ಪ್ರಾರಂಬವಾದರು ಸಹಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುವುದರಲ್ಲಿ ವಿಳಂಭವಾಗುತ್ತಿದೆ ಎಂದು ಪಕ್ಷ‌ದೂರಿದೆ.

ಸೆಪ್ಟಂಬರ್ ವರೆಗೂ ತಲುಪುವ ಹಂತವನ್ನು ಸರ್ಕಾರ ಮತ್ತು ಅಧಿಕಾರಿಗಳು ಮಾಡುತ್ತಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಮೂರು ತಿಂಗಳುಗಳ ಕಾಲ ಎಲ್ಲಿ ಉಳಿದುಕೊಂಡು ಶಿಕ್ಷಣವನ್ನು ಪಡೆಯಬೇಕು ಎಂಬುದು ಸಾಮಾನ್ಯ ಜ್ಞಾನವು ಸರ್ಕಾರಗಳಿಗೆ ಇಲ್ಲದಂತಾಗಿದೆ.

ರಾಜ್ಯ ಸರ್ಕಾರ ಕೂಡಲೆ ಈ ವರ್ಷದ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಕಲ್ಪಿಸಬೇಕೆಂದು ಯುವಜನತಧಳ ಮನವಿಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಹಾಸ್ಟೆಲಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ 40% ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳನ್ನ ಕಲ್ಪಿಸಿಕೋಡುವ ವ್ಯವಸ್ಥೆ ಈಗ ನಮ್ಮ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಲಭ್ಯವಿದೆ, ಆದರೆ ಇನ್ನುಳಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿ ತಮ್ಮ ಉನ್ನತ ಶಿಕ್ಷಣವನ್ನು ಪಡೆಯಲು ಕಷ್ಟಕರವಾಗುತ್ತಿದೆ.

ಸರ್ಕಾರ ಕೂಡಲೇ ಹಾಸ್ಟೆಲಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ವಿಶೇಷ ಅನುದನವನ್ನು ನೀಡಿ ಹಾಸ್ಟೆಲಗಳ ಸಂಖ್ಯೆಗಳನ್ನ ಹೆಚ್ಚಳ ಮಾಡಬೇಕು ಹಾಗೂ ಈಗಿರುವ ಹಾಸ್ಟೆಲಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಯುವಜನತಧಳ ಒತ್ತಾಯಿಸುತ್ತದೆ.

ಲಕ್ಷಂತಾರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆ ಸರ್ಕಾಗಳು ನೀಡುವ ವಿದ್ಯಾರ್ಥಿ ವೇತನ ಸಹಾಕರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಂತಾರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿ ವೇತನ ಜಮೆಯಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ,

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ್ನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೆ ಇರುವುದು, ರೈತ ವಿದ್ಯಾನಿಧಿಯನ್ನ ರದ್ದುಗೊಳಿಸಿರುವುದು ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋದಿ ನೀತಿಯನ್ನ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಭದಿಸಿದ ಸಚಿವರು ತಕ್ಷಣವೆ ವಿದ್ಯಾರ್ಥಿ ವೇತನ್ನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಯುವಜನತಧಳ ಆಗ್ರಹಿಸಿದೆ.

ಪ್ರಮುಖ ಬೇಡಿಕೆಗಳು

ಹಾಸ್ಟೆಲಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲಗಳಿಗೆ ಪ್ರವೇಶಾತಿ ನೀಡಬೇಕು.

ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲಗಳ ಸಂಖ್ಯೆಯನ್ನು ಹೆಚ್ಚಳಮಾಡಬೇಕು.

ಬಾಕಿ ಉಳಿದಿರುವ ಹಿಂದಿವ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ನಮೆ ಮಾಡಬೇಕು ಎಂಬ ಬೇಡಿಕೆ ಇಡಲಾಗಿದೆ.

ಇದನ್ನೂ ಓದಿ-https://suddilive.in/archives/18448

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close