ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಡಾ.ಧನಂಜಯ ಸರ್ಜಿ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ನಗರದ ನಾರಾಯಣ ಹೃದಯಾಲಯದಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ರೇಖಾ ಅವರನ್ನು ಗುರುವಾರ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ ಆರೋಗ್ಯದ ಬಗ್ಗೆ ವಿಚಾರಿಸಿ ಧೈರ್ಯ ತುಂಬಿದರು.

ಪತಿ ಕೂಲಿ ಕೆಲಸ ಮಾಡಿದರೆ ಪತ್ನಿ ರೇಖಾ ಆಶಾಕಾರ್ಯಕರ್ತರರಾಗಿದ್ದರು. ಇವರಿಗೆ ಇಬ್ವರು ಮಕ್ಕಳಿದ್ದಾರೆ. ಮನೆಗೆ ಹೋಗಿ ವಾಪಾಸ್ ಕೆಲಸಕ್ಕೆ ಮರಳುವಾಗ ಅಪಘಾತ ಸಂಭವಿಸಿತ್ತು. ತಲೆಗೆ ತೀವ್ರತರನಾದ ಪಟೆಟ್ಟು ತಗುಲಿತ್ತು. ಅವರನ್ನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು.

ಈ ವೇಳೆ ನಾರಾಯಣ ಹೃದಯಾಲಯದ ಸ್ಪೆಷಲಿಟಿ ಡೈರೆಕ್ಟರ್ ವರ್ಗೀಸ್, ನಾನ್ ಮೆಡಿಕಲ್ ವಿಭಾಗದ ಮುಖ್ಯಸ್ಥರಾದ ಶ್ರೀಕಾಂತ್ ಹೆಗಡೆ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ-https://suddilive.in/archives/18999

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close