ಸುದ್ದಿಲೈವ್/ಶಿವಮೊಗ್ಗ
ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಕರ್ನಾಟಕ ಕಾನೂನು ಅಧಿಕಾರಿಗಳ(ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977 ರ ನಿಯಮ 5 ಮತ್ತು 26(2) ಹಾಗೂ 12(ಎ)(ಬಿ) ಮತ್ತು (ಸಿ) ರನ್ವಯ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಆಯ್ಕೆ ಬಯಸುವವರು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಆಯ್ಕೆ ಬಯಸುವ ಅರ್ಹ ನ್ಯಾಯವಾದಿಗಳು ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ದಪಡಿಸಿ ದಿ: 23-07-2024 ರ ಸಂಜೆ 5 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ: 08182-221100, 08182-221010, 9110642146 ನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ-https://suddilive.in/archives/19096