ಅಪರ ಸರ್ಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ

 




ಸುದ್ದಿಲೈವ್/ಶಿವಮೊಗ್ಗ


ಜಿಲ್ಲೆಯ ಸಾಗರ ಮತ್ತು ಸೊರಬ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಈ ಹುದ್ದೆಗೆ ಆಯ್ಕೆ ಬಯಸುವವರು 07(ಏಳು) ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಅರ್ಹ ನ್ಯಾಯವಾದಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ದಪಡಿಸಿ ದಿನಾಂಕ: 02-08-2024 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನ್ಯಾಯಾಂಗ ಶಾಖೆ, ಡಿಸಿ ಕಚೇರಿ, ದೂ.ಸಂ: 08182-221100, 221010, 9110642146 ನ್ನು ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ-https://www.suddilive.in/2024/07/blog-post_853.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close