ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಕರವೇ ಆಗ್ರಹ

ಸುದ್ದಿಲೈವ್/ಶಿವಮೊಗ್ಗ

ಡಾ.ಸರೋಜಿನಿ ಮಹಿಷಿ ವರದಿ ಜಾರಿ ಆಗುವಂತೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಅದರಂತೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಕೋಟ್ಯಾನ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಯನ್ನ ಕನ್ನಡಿಗರಿಗೆ ಮೀಸಲಿಡಬೇಕು.

ಖಾಸಗಿ ಸಂಸ್ಥೆಗಳ ಇತರೆ ಹುದ್ದೆಗಳಲ್ಲಿ ಶೇ.80 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಕನ್ನಡದಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾದವರಿಗೆ ಹುದ್ದೆ ನೀಡಬೇಕು. ನಿಯಮಾವಳಿ ಪಾಲಿಸದವರಿಗೆ ದಂಡ ವಿಧಿಸಬೇಕು, ಭೂಮಿ ನೀಡಿದರೆ ವಾಪಾಸ್ ಪಡೆದು ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು.

ಸರ್ಕಾರಿ ಸಂಸ್ತೆ ಮತ್ತು ಸಾರ್ವಜನಿಕ ವಲಯದ ಘಟಕದಲ್ಲಿ ಕನ್ನಡಿಗರಿಗೆ 100 ಪ್ರತಿಷ್ಠಿತ ಮೀಸಲಾತಿ ನೀಡಬೇಕು. ಸರ್ಕಾರಿ ಸಾರ್ವಜನಿಕ ವಲಯದಲ್ಲಿ ಗ್ರೂಪ್ ಡಿ ಮತ್ತು ಸಿ ಯನ್ನ ಕನ್ನಡಿಗರಿಗೆ ಮೀಸಲಿಡಬೇಕು. ಕೇಂದ್ರ ಸರ್ಕಾರದ ವಲಯದಲ್ಲಿ ಸಿ ಮತ್ತು ಡಿ ಗ್ರೂಪ್ ಹುದ್ದೆಯನ್ನ ಶೇ.90 ರಷ್ಟು ಕನ್ನಡಿಗರಿಗೆ ಮೀಸಲಿಡಬೇಕು.

ಕನ್ನಡಿಗರಿಗೆ ಮೀಸಲಾತಿ ಜಾರಿಗೆ ತರುವಲ್ಲಿ ಅಧಿಕಾರಿಗಳು ವಿಫಲರಾದರೆ ಅವರ ವಿರುದ್ಧ ಕಾನೂನು ಜಾರಿ ಮಾಡಬೇಕು. ಸರ್ಕಾರ ಕನ್ನಡ ಭಾಷೆ ವಿಷಯದಲ್ಲಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. ನ್ಯಾಯಾಲಯದಲ್ಲಿ ಹೋರಾಡಲು ಸಮರ್ಥ ವಕೀಲರ ನೇಮಕಾತಿ ಮಾಡಬೇಕು.

ಕನ್ನಡ ನಾಮಫಲಕ ಜಾರಿ ಮಾಡಿದಂತೆ ಕನ್ಬಡಿಗರ ಹುದ್ದೆಗೆಸಂಬಂಧಿಸಿದಂತೆಸೂಕ್ತ ಕಾನೂನು ಜಾರಿಮಾಡಬೇಕು. ಅದಕ್ಕಾಗಿ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಪದರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಬೀರ್, ಗಂಗಾಧರ್, ರಂಗನಾಥ್ ಎಸ್, ಗೋಪಿ ಬಿ.ಹೆಚ್, ಅನಿಲ್ ಕುಮಾರ್ ಲಿಂಗರಾಜು ಡಿ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ-https://suddilive.in/archives/18220

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close