ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಹಲವು ಸ್ಥಳಗಳಿಗೆ ನಿರ್ಬಂಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ನದಿಗಳು, ಹಳ್ಳಗಳು ತುಂಬಿ, ಅಪಾಯಮಟ್ಟ ಮೀರಿ ಹರಿಯುತ್ತರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ನೀರಿಗೆ ಇಳಿಯದಂತೆ ಆಯಾ ಜಾಗದಲ್ಲಿ ಬ್ಯಾನರ್ ಗಳನ್ನ ಕಟ್ಟಿ ಎಚ್ಚರಿಸುವ ಕೆಲಸ ಮಾಡಿದೆ.
ಸಾರ್ವಜನಿಕರ ಹಿತದೃಷ್ಠಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ. ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಮಾಡುವುದಕ್ಕೆ ನಿಷೇಧಿಸಿರುವ ಬಗ್ಗೆ ಬ್ಯಾರಿಕೇಡ್ ನಿರ್ಮಿಸಿ ಜಾಗೃತಿ ಕಾರ್ಯಕ್ಕೆ ಮುಂದಾಗಿದೆ.
ನೀರಿನ ಹರಿವು ಕಡಿಮೆಯಾಗುವವರೆಗೆ ನಿಷೇಧ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳ ಅಳವಡಿಕೆ ಮಾಡಲಾಗಿದೆ.
ಇದನ್ನೂ ಓದಿ-https://suddilive.in/archives/19605