ಸುದ್ದಿಲೈವ್/ಶಿವಮೊಗ್ಗ
ವಿವಿಧ ಬೇಡಿಕೆ ಈಡೇರಿಸುವಂತೆ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ನಗರದ ಸಂಸದರ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ನಡೆಸಿದ್ದಾರೆ.
ಎಸ್ ಕೆ ಎಂ ಜೊತೆ ಸದರಿ ಒಡಂಬಡಿಕೆಗೆ ಭಾರತ ಸರ್ಕಾರ ಕೃಷಿ ಇಲಾಖೆ ಕಾರ್ಯದರ್ಶಿ ಸಹಿ ಮಾಡಿದ್ದರು ಸರ್ಕಾರದ ಹಂತದಲ್ಲಿ ಜಾರಿಯಾಗಿಲ್ಲ. ರೈತರು ಮತ್ತು ಕೃಷಿ ಕಾರ್ಮಿಕರ ಸಮಗ್ರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯುತ್ ವಲಯದ ಖಾಸಗೀಕರಣ ಮತ್ತು ಪ್ರೀಪೇಯ್ಡ್ ಸ್ಮಾರ್ಟ್ ಮೀಟರ್ ಗಳ ಪ್ರಸ್ತಾಪ ಕೈಬಿಡಬೇಕು
ಎಂದು ಒತ್ತಾಯಿಸಿದ್ದಾರೆ. ಸಂಸದ ಬಿ ವೈ ರಾಘವೇಂದ್ರರಿಗೆ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.