ಕುಸಿದು ಬಿದ್ದ ಶಾಲೆ ಗೋಡೆ |
ಸುದ್ದಿಲೈವ್/ಸೊರಬ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತವರು ಕ್ಷೇತ್ರದಲ್ಲಿಯೇ ಶಾಲ ಕೊಠಡಿಯ ಗೋಡೆ ಕುಸಿದು ಬಿದ್ದದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ತಾಲೂಕಿನ ಮಳೆಯ ಅರ್ಭಟ ಮುಂದುವರೆದಿದ್ದು, ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದೆ. ಈ ಶಾಲೆ ಶಿಕ್ಷಣ ಸಚಿವರ ತವರು ಕ್ಷೇತ್ರ ಕುಬಟೂರನಿಂದ 2 ಕಿಮಿ ದೂರದಲ್ಲಿದೆ. ಗೋಡೆ ಕುಸಿತಕ್ಕೆ ಬೆಂಚುಗಳು ಮುರಿದು ಹೋಗಿವೆ.
ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನ ತರಗತಿ ಮುಗಿಸಿ ವಿದ್ಯಾರ್ಥಿಗಳಿಗೆ ವಿಶ್ರಾಂತಿ ನೀಡಲಾಗಿತ್ತು. ತರಗತಿಯಲ್ಲಿ 31 ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ನೀಡಿದ ವಿಶ್ರಾಂತಿ ಸಮಯದಲ್ಲಿ ಕೊಠಡಿ ಗೋಡೆ ಕುಸಿದಿದೆ.
ವಿದ್ಯಾರ್ಥಿಗಳಿಗೆ ಅನಾಹುತವಾಗಿಲ್ಲ. ಶಾಲೆಯು ಶಿಥಿಲಾವ್ಯಸ್ಥೆಯಲ್ಲಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂಬುದು ಪೋಷಕರ ಆರೋಪವಾಗಿದೆ. ಅದರೆ ನಿನ್ನೆ ತಾನೆ ಬಿಇಒರವರು ಬಂದು ತಪಾಸಣೆ ನಡೆಸಿದ್ದು, ತಪಾಸಣೆ ನಡೆಸಿದ ಮರುದಿನವೇ ಈ ಘಟನೆ ನಡೆದಿದೆ.