ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ

ಸುದ್ದಿಲೈವ್/ಶಿವಮೊಗ್ಗ

ಚಲಿಸುತ್ತಿದ್ದ 800 ಕಾರಿನ ಮೇಲೆ  ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇದರಿಂದ ದೊಡ್ಡದಾದ ಅನಾಹುತವೊಂದು ಸಣ್ಣ ಪ್ರಮಣದಲ್ಲಿ  ನಡೆದಿದೆ.

ಸಾಗರದ ಸಿಗಂದೂರು ರಸ್ತೆಯಲ್ಲಿ ಈ ಘಟನೆ ನ ಏದಿದದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಿಂದ ಮಾರುತಿ 800 ಕಾರೊಂದು ಚಲಿಸುವಾಗ ಮರ ಕಾರಿನ ಮೇಲೆ ಬಿದ್ದಿದೆ.

ಕಾರಿನಲ್ಲಿದ್ದ ಇಬ್ಬರು ಯುವಕರು ಅದೃಷ್ಟವಶಾದ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸಧ್ಯಕ್ಜೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಪಾರಾದ ಯುವಕರನ್ನ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಪುನೀತ್ ಹಾಗೂ ರವಿ ಎಂದು ಗುರುತಿಸಲಾಗಿದೆ.

ತಕ್ಷಣ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಇದನ್ನೂ ಓದಿ-https://suddilive.in/archives/19200

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close