ಸುದ್ದಿಲೈವ್/ರಿಪ್ಪನ್‌ಪೇಟೆ
ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ.
ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ.
ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದರಿಂದ ಖಿನ್ನತೆಗೊಳಗಾಗಿದ್ದನು ಎನ್ನಲಾಗುತಿದೆ.
ಶುಕ್ರವಾರ ರಾತ್ರಿ ಆನಂದಪುರ ಸಮೀಪದ ಅಡೂರು ಗ್ರಾಮದ ತನ್ನ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ ಕೂಡಲೇ ಆತನನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್ ಗೆ ಕರೆದೊಯ್ಯಲಾಗಿತ್ತು.
ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮನುಷ್ ಡಿ ಮೃತಪಟ್ಟಿದ್ದಾನೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ-https://suddilive.in/archives/19259